October 5, 2012 Chavadi Koota, Town Hall, Mangalore

October 5, 2012 Chavadi Koota, Town Hall, Mangalore

ತುಳು ಅಕಾಡೆಮಿ: ಒಕ್ಟೋಬರ್ ೫ರಂದು ಪ್ರಾಥಮಿಕ ಹಾಗೂ ಪ್ರೌಢಶಾಲಾ ಮುಖ್ಯಸ್ಥರೊಂದಿಗೆ ಸಂವಾದ

ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿವತಿಯಿಂದ ಮಂಗಳೂರಿನ ಪುರಭವನದಲ್ಲಿ ಒಕ್ಟೋಬರ್ ತಿಂಗಳ ೫ನೇ ತಾರೀಕು ಶುಕ್ರವಾರದಂದು ಪೂರ್ವಾಹ್ನ ಗಂಟೆ ೧೦.೦೦ಕ್ಕೆ ದ. ಕ ಜಿಲ್ಲೆಯ ಪ್ರಾಥಮಿಕ ಮತ್ತು ಪ್ರೌಢಶಾಲಾ ಮುಖ್ಯಸ್ಥರೊಂದಿಗೆ ಚಾವಡಿ ಕೂಟ ನಡೆಯಲಿದೆ. ಹಾಗೂ ಪ್ರಾಥಮಿಕ ಹಾಗೂ ಪ್ರೌಢಶಾಲಾ ಮುಖ್ಯಸ್ಥರೊಂದಿಗೆ ಸಂವಾದ’ ಕಾರ್‍ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಕಾರ್ಯಕ್ರಮದಲ್ಲಿ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾದ ಶ್ರೀ ಉಮಾನಾಥ ಎ. ಕೋಟ್ಯಾನ್ ಇವರು ಅಧ್ಯಕ್ಷತೆವಹಿಸಲಿರುವರು.

ಮುಖ್ಯ ಅತಿಥಿಗಳಾಗಿ ಅನಿವಾಸಿ ಭಾರತಿಯ ಸಮಿತಿ ಉಪಾದ್ಯಕ್ಷರು ಮತ್ತು ಶಾಸಕರಾದ ಕ್ಯಾಪ್ಟನ್ ಗಣೇಶ್ ಕಾರ್ನಿಕ್, ಮಂಗಳೂರು ವಿಧಾನಸಭಾ ಕ್ಷೇತ್ರದ ಶಾಸಕರಾದ ಯು. ಟಿ. ಖಾದರ್, ದ. ಕ. ಜಿ. ಪಂ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾದ ಮೋಸೆಸ್ ಜಯಶೇಖರ್, ಶ್ರೀಶಾರದಾ ವಿದ್ಯಾಲಯ ಮಂಗಳೂರು ಇದರ ಸಂಚಲಾಕರಾದ ಎಂ. ಬಿ ಪುರಾಣಿಕ್, ದ. ಕ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷರಾದ ಶಿವಶಂಕರ್ ಭಟ್ ಕೆ, ದ. ಕ ಜಿಲ್ಲಾ ದೈಹಿಕ ಶಿಕ್ಷಕರ ಸಂಘದ ಅಧ್ಯಕ್ಷರಾದ ಜೋಸೆಫ್ ಇವರುಗಳು ಭಾಗವಹಿಸಲಿದ್ದಾರೆ.

ಸಂವಾದ ಕಾರ್ಯಕ್ರಮದಲ್ಲಿ ಭಾಗವಹಿಸುವ ಶಿಕ್ಷಕರಿಗೆ ಶಿಕ್ಷಣ ಇಲಾಖೆಯ ‘ಅನ್ಯ ಕಾರ್ಯ ನಿಮಿತ್ತ’ ಸವಲತ್ತು ನೀಡಿ ಸುತ್ತೋಲೆ ಹೊರಡಿಸಿದೆ. ಈ ಕಾರ್ಯಕ್ರಮದಲ್ಲಿ ಪ್ರಾಥಮಿಕ ಹಾಗೂ ಪ್ರೌಢಶಾಲಾ ಮುಖ್ಯಸ್ಥರು ಹಾಗೂ ತುಳುವರು ಅಧಿಕ ಸಂಖ್ಯೆಯಲ್ಲಿ ಪಾಲ್ಗೊಂಡು ಯಶಸ್ವಿಗೊಳಿಸುವಂತೆ ಅಕಾಡೆಮಿ ಅಧ್ಯಕ್ಷ ಶ್ರೀ ಉಮಾನಾಥ ಎ ಕೋಟ್ಯಾನ್ ಹಾಗೂ ರಿಜಿಸ್ಟ್ರಾರ್ ಚಂದ್ರಹಾಸ ರೈ ಬಿ ಅವರು ವಿನಂತಿಸಿದ್ದಾರೆ.