Pune Tulu kootada 15ne varshikothsava

Pune Tulu kootada 15ne varshikothsava

ಪುಣೆ ತುಳುಕೂಟದ ೧೫ನೇ ವಾರ್ಷಿಕೋತ್ಸವ

ಮಂಗಳೂರು: ಪುಣೆ ತುಳುಕೂಟದ ೧೫ನೇ ವಾರ್ಷಿಕೋತ್ಸವವು ಅ.೧೫ ರಂದು ಪುಣೆಯ ಮಹಾಲಕ್ಷ್ಮೀ ಸಭಾಂಗಣದಲ್ಲಿ ಜರಗಿತು. ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಉಮಾನಾಥ ಎ. ಕೋಟ್ಯಾನ್ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಹಿರಿಯ ಸಾಹಿತಿ ಡಾ| ಸುನೀತಾ ಶೆಟ್ಟಿ ಪುಣೆ ಬಂಟರ ಸಂಘದ ಮಾಜಿ ಅಧ್ಯಕ್ಷ ಬಾಲಕೃಷ್ಣ ಹೆಗ್ಡೆ, ಸಂಘದ ಅಧ್ಯಕ್ಷ ಮಿಯ್ಯಾರು ರಾಜ್ಕುಮಾರ್ ಎಂ ಶೆಟ್ಟಿ, ಸಂಘದ ಗೌರವ ಪ್ರಧಾನ ಕಾರ್ಯದರ್ಶಿ ಕಿರಣ್ ಬಿ ರೈ ಕರ್ನೂರು, ಉಪಾಧ್ಯಕ್ಷ ಯಶೋಧರ ಗೌಡ ಕೊಣಾಜೆ, ಕೋಶಾಧಿಕಾರಿ ಯಶವಂತ್ ಶೆಟ್ಟಿ ಉಳಾಯಿಬೆಟ್ಟು ಪಿಂಪ್ರಿ -ಚಿಂಚ್ವಾಡ್ ಪ್ರಾದೇಶಿಕ ಸಮಿತಿ ಕಾರ್ಯಾಧ್ಯಕ್ಷ ಕಟ್ಟಿಂಗೇರಿ ಮಹೇಶ್ ಹೆಗ್ಡೆ, ತುಳುಕೂಟದ ಮಹಿಳಾ ಕಾರ್ಯಧ್ಯಕ್ಶೆ ಪ್ರಿಯಾ ಎಚ್ ದೇವಾಡಿಗ ಹಾಗೂ ಇತರರು ವೇದಿಕೆಯಲ್ಲಿದ್ದರು. ಸಮಾರಂಭದಲ್ಲಿ ಪುಣೆಯ ಎಲ್ಲ ಸಂಘ-ಸಂಸ್ಥೆಗಳ ಅಧ್ಯಕ್ಷರು, ಪದಾಧಿಕಾರಿಗಳು, ಮಹಿಳಾ ಸದಸ್ಯೆಯರು ಉಪಸ್ಥಿತರಿದ್ದರು. ಸಾಂಸ್ಕೃತಿಕ ಕಾರ್ಯಕ್ರಮವನ್ನು ಚಂದ್ರಶೇಖರ ಶೆಟ್ಟಿ ನಿಟ್ಟೆ ಹಾಗೂ ಸಭಾ ಕಾರ್ಯಕ್ರಮವನ್ನು ಶಿವನಾಥ ರೈ ಮೇಗಿನಗುತ್ತು ನಿರೂಪಿಸಿದರು. ಕಿರಣ್ ಬಿ. ರೈ ವಂದಿಸಿದರು. ಸಾಂಸ್ಕೃತಿಕ ಕಾರ್ಯಕ್ರಮವಾಗಿ ವಿವಿಧ ನೃತ್ಯಾವಳಿ ಹಾಗೂ ರಂಗತರಂಗ ಕಲಾವಿದರಿಂದ ನಾಟಕ ಪ್ರದರ್ಶನಗೊಂಡಿತು.