ವಿ. ವಿ ಕುಲಪತಿಯವರಿಗೆ ಮೇ 30 ರಂದು ಸನ್ಮಾನ

ವಿ. ವಿ ಕುಲಪತಿಯವರಿಗೆ ಮೇ 30 ರಂದು ಸನ್ಮಾನ

28-05-2018

ಸ್ನಾತಕೋತ್ತರ ತುಳು ವಿಭಾಗ ಆರಂಭ
ಮೇ 30 ವಿ. ವಿ. ಕುಲಪತಿಯವರಿಗೆ ಸನ್ಮಾನ

ಮಂಗಳೂರು: ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಮನವಿಯ ಮೇರೆಗೆ ಮಂಗಳೂರು ವಿಶ್ವವಿದ್ಯಾಲಯವು ಸ್ನಾತಕೋತ್ತರ ಪದವಿಯಲ್ಲಿ ತುಳು ವಿಭಾಗವನ್ನು ಪ್ರಸಕ್ತ ಶೈಕ್ಷಣಿಕ ವರ್ಷದಿಂದಲೇ ಪ್ರಾರಂಭಿಸಲು ಉದ್ದೇಶಿಸಿದೆ. ಇದಕ್ಕೆ ಕಾರಣಕರ್ತರಾದ ವಿಶ್ವವಿದ್ಯಾಲಯದ ಕುಲಪತಿ ಪೆÇ್ರ.ಕೆ ಭೈರಪ್ಪರವರಿಗೆ ಸಮಸ್ತ ತುಳುವರ ಪರವಾಗಿ ಮೇ.30 ರಂದು ಸಮ್ಮಾನಿಸಿ ಗೌರವಿಸಲಾಗುವುದು ಎಂದು ಅಕಾಡೆಮಿ ಅಧ್ಯಕ್ಷ ಎ. ಸಿ. ಭಂಡಾರಿ ತಿಳಿಸಿದ್ದಾರೆ.
ಉರ್ವಸ್ಟೋರ್‍ನ ತುಳುಭವನದ ಸಿರಿಚಾವಡಿಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ನಾಡಿನ ಹಿರಿಯ ಜಾನಪದ ವಿದ್ವಾಂಸ, ಸಾಹಿತಿ, ಡಾ. ಏರ್ಯ ಲಕ್ಷ್ಮೀನಾರಾಯಣ ಆಳ್ವರವರು ಕುಲಪತಿಯವರನ್ನು ಸನ್ಮಾನಿಸಲಿದ್ದಾರೆ. ಮಂಗಳೂರು ವಿಶ್ವವಿದ್ಯಾನಿಲಯ ತುಳುಪೀಠದ ಅಧ್ಯಕ್ಷ ಪೆÇ್ರ. ಶಿವರಾಮ ಶೆಟ್ಟಿ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಅಕಾಡೆಮಿ ಅಧ್ಯಕ್ಷ ಎ. ಸಿ. ಭಂಡಾರಿ ಅಧ್ಯಕ್ಷತೆ ವಹಿಸಲಿದ್ದಾರೆ. ತುಳುಭಾಷೆಯ ಬೆಳವಣಿಗೆಯಲ್ಲಿ ಮೈಲಿಗಲ್ಲು ಆಗಿರುವ ಸ್ನಾತಕೋತ್ತರ ಪದವಿಯಲ್ಲಿ ತುಳುಕಲಿಕೆಗೆ ಅವಕಾಶ ಲಬಿಸಿರುವುದು ತುಳು ವಿದ್ವತ್‍ವಲಯಕ್ಕೆ ಮಹತ್ವದ ಕೊಡುಗೆಯಾಗಲಿದೆ. ಈ ಕಾರ್ಯಕ್ರಮದಲ್ಲಿ ತುಳುಭಾಷಾ ಪ್ರೇಮಿಗಳು, ಸಾಹಿತಿಗಳು, ವಿದ್ವಾಂಸರು, ಉಪನ್ಯಾಸಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ವಿನಂತಿಸಲಾಗಿದೆ.
ಸಹಿ/-
(ಎ. ಸಿ. ಭಂಡಾರಿ)
ಅಧ್ಯಕ್ಷರು